ಕೊಲೊಸ್ಸೆಯವರಿಗೆ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3-4 ಕ್ರಿಸ್ತಯೇಸುವಿನ ರಹಸ್ಯವನ್ನು ಪ್ರಚುರಪಡಿಸಲು ನಮಗೆ ಅವಕಾಶ ದೊರಕುವಂತೆ ಪ್ರಾರ್ಥಿಸಿರಿ. ಈ ಶುಭಸಂದೇಶದ ನಿಮಿತ್ತವೇ ನಾನು ಸೆರೆಯಲ್ಲಿ ಇದ್ದೇನೆಂಬುದು ನಿಮಗೆ ತಿಳಿದಿದೆ. ನಾನು ಶುಭಸಂದೇಶವನ್ನು ಸ್ಪಷ್ಟವಾಗಿಯೂ ಸರಳವಾಗಿಯೂ ಸಾರುವಂತೆ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3-4 ಇದಲ್ಲದೆ ನಮಗೋಸ್ಕರವೂ ಪ್ರಾರ್ಥನೆ ಮಾಡಿರಿ. ಕ್ರಿಸ್ತನ ವಿಷಯದಲ್ಲಿ ದೇವರು ತಿಳಿಯಪಡಿಸಿದ ಸತ್ಯಾರ್ಥವನ್ನು ಪ್ರಸಂಗಿಸುವದಕ್ಕೆ ಆತನು ಅನುಕೂಲವಾದ ಸಂದರ್ಭವನ್ನು ನಮಗೆ ದಯಪಾಲಿಸಿ ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ತಿಳಿಸುವಂತೆ ಅನುಗ್ರಹಮಾಡಬೇಕೆಂದು ಬೇಡಿಕೊಳ್ಳಿರಿ; ಆ ಸತ್ಯಾರ್ಥದ ನಿವಿುತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾವು ಕ್ರಿಸ್ತ ಯೇಸುವಿನ ರಹಸ್ಯವನ್ನು ಮಾತನಾಡುವಂತೆ ದೇವರು ನಮ್ಮ ಸಂದೇಶಕ್ಕೆ ಬಾಗಿಲನ್ನು ತೆರೆಯುವಂತೆ ನಮಗೋಸ್ಕರವೂ ಪ್ರಾರ್ಥಿಸಿರಿ. ಈ ಸೇವೆಗಾಗಿಯೇ ನಾನು ಸೆರೆಯಲ್ಲಿದ್ದೇನಲ್ಲಾ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತುಮಿ ಅಮ್ಚ್ಯಾಸಾಟ್ನಿಬಿ ಮಾಗ್ನಿ ಕರಾ. ಲೊಕಾಕ್ನಿ ಸಗ್ಳಿ ದೆವಾಚಿ ಬರಿ ಖಬರ್ ಸಾಂಗುಕ್; ಬರೊ ಅವಕಾಸ್ ತೊ ತುಮ್ಕಾ ದಿ ಸಾರ್ಕೆ ಮಾಗ್ನಿ ಕರಾ, ದೆವಾನ್ ಕ್ರಿಸ್ತಾಚ್ಯಾ ವಿಶಯಾತ್ ಅಮ್ಕಾ ಕಳ್ವಲ್ಲೆ ಘುಟ್ಟ್ ಅಮಿ ಶಿಕ್ವುಕ್ ಹೊಯ್ ಸಾರ್ಕೆ ಮಾಗ್ನಿ ಕರಾ. ಮಿಯಾ ಹೆ ಖರೆ ಪರ್ಗಟ್ ಕರಲ್ಲ್ಯಾಸಾಟ್ನಿಚ್ ಅತ್ತಾ ಬಂಧಿಖಾನ್ಯಾತ್ ಹಾಂವ್. ಅಧ್ಯಾಯವನ್ನು ನೋಡಿ |
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,