Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದ್ಯಧರ್ಮದ ನಾಯಕನಾಗಲು ನನ್ನ ಸಮವಯಸ್ಕರರಿಗಿಂತ ಎಷ್ಟೋ ಕಾರ್ಯಗಳನ್ನು ಮಾಡಿದೆನು. ನಮ್ಮ ಪೂರ್ವಿಕರ ಸಂಪ್ರದಾಯಗಳನ್ನು ಬೇರೆಲ್ಲರಿಗಿಂತಲೂ ಅತ್ಯಧಿಕ ನಿಷ್ಠೆಯಿಂದ ಅನುಸರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜುದೆವಾಂಚ್ಯಾ ಲೊಕಾತ್ನಿ ದೆವ್ ಧರ್ಮಾಚ್ಯಾ ಕಾಮಾತ್ ಫಿಡೆ ಹೊತ್ತೊ, ಅನಿ ಅಮ್ಚ್ಯಾ ವಾಡ್ ವಡ್ಲಾಂಚಿ ಪದ್ದತ್ ಲೈ ಹುರ್ಪೆನ್ ಮಿಯಾ ಪಾಳುನ್ಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:14
15 ತಿಳಿವುಗಳ ಹೋಲಿಕೆ  

ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.


ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


“ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.


ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.


ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.


ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.


ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.


ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.


ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.


ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ಪುನಃ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು