Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ದುಷ್ಟಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕೆ ಅನುಸಾರವಾಗಿ ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮ್ಚ್ಯಾ ದೆವಾಚ್ಯಾ ಅನಿ ಬಾಬಾಚ್ಯಾ ಇಚ್ಛ್ಯಾ ಸಾರ್ಕೆ ಹ್ಯಾ ಬುರ್ಶ್ಯಾ ಕಾಲಾತ್ನಾ ಅಮ್ಕಾ ಸ್ವತಂತ್ರ್ ಕರುಸಾಟ್ನಿ ಕ್ರಿಸ್ತಾನ್ ಅಮ್ಚ್ಯಾ ಪಾಪಾಚ್ಯಾಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:4
56 ತಿಳಿವುಗಳ ಹೋಲಿಕೆ  

ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.


ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.


ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.


ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.


ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್‍.


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ,


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು


ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.


“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ.


ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ.


ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.


ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.


“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.


“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.


“ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.


ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.


ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.


ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.


ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.


ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು