Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವರಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರಿಗೆ ಯುಗಯುಗಾಂತರಗಳಲ್ಲಿಯೂ ಸ್ತೋತ್ರ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಎಂದೆಂದಿಗೂ ದೇವರಿಗೆ ಮಹಿಮೆಯಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರಿಗೆ ಯುಗಯುಗಾಂತರಗಳಿಗೂ ಮಹಿಮೆಯಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತ್ಯಾ ದೆವಾಕ್ ಸದಾಸರ್ವತಾಕ್ ಮಹಿಮಾ ಹೊಂವ್ದಿತ್ ಆಮೆನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:5
23 ತಿಳಿವುಗಳ ಹೋಲಿಕೆ  

ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.


ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.


ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.


“ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.


ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್‍.


ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.


ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.


ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು.


ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.


ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.


ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು