Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯನ್ನು ಹಿಡಿದಿರುವದಕ್ಕೆ ಆಶ್ಚರ್ಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸ್ವಲ್ಪಕಾಲದ ಹಿಂದೆ ತನ್ನನ್ನು ಹಿಂಬಾಲಿಸುವುದಕ್ಕಾಗಿ ನಿಮ್ಮನ್ನು ಕರೆದಾತನು ದೇವರೇ. ಆತನು ನಿಮ್ಮನ್ನು ಯೇಸು ಕ್ರಿಸ್ತನ ಮೂಲಕವಾಗಿ ಬಂದ ತನ್ನ ಕೃಪೆಯ ಮೂಲಕ ಕರೆದನು. ಆದರೆ ಈಗ ನಾನು ನಿಮ್ಮೆಲ್ಲರ ವಿಷಯದಲ್ಲಿ ಆಶ್ಚರ್ಯಗೊಂಡಿದ್ದೇನೆ. ನೀವು ಈಗಾಗಲೇ ವಿಮುಖರಾಗಿ ಬೇರೊಂದು ಸುವಾರ್ತೆಯನ್ನು ನಂಬಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಕ್ರಿಸ್ತಾಚ್ಯಾ ದಯೆನ್ ತುಮ್ಕಾ ಬಲ್ವಲ್ಲ್ಯಾ ಬಾಬಾಕ್ ಎವ್ಡ್ಯಾ ಲಗ್ಗುನಾ ಸೊಡುನ್, ದುಸ್ರ್ಯಾ ಬರ್‍ಯಾ ಖಬ್ರಿಚ್ಯಾ ಫಾಟ್ನಾ ತುಮಿ ಜಾತಲೆ ಬಗುನ್ ಮಾಕಾ ಆಜಾಪ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:6
33 ತಿಳಿವುಗಳ ಹೋಲಿಕೆ  

ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.


ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ,


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,


ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.


ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.


ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.


ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,


ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.


ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.


ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!


ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.


ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.


ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.


ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.


ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,


ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.


ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.


ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”


“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು