Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯಕೋಬನ ಕಡೆಯಿಂದ ಕೆಲವು ಸಹೋದರರು ಬರುವುದಕ್ಕೆ ಮುಂಚೆ ಆತನು ಅನ್ಯಧರ್ಮೀಯರೊಡನೆ ಊಟಮಾಡುತ್ತಿದ್ದನು. ಆದರೆ ಅವರು ಬಂದ ಮೇಲೆ ಸುನ್ನತಿ ಪರವಾದಿಗಳಿಗೆ ಅಂಜಿ ಅನ್ಯಧರ್ಮೀಯರಿಂದ ದೂರವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ಯಾಕೋಬನ ಕಡೆಯಿಂದ ಕೆಲವರು ಬರುವದಕ್ಕೆ ಮುಂಚೆ ಅವನು ಅನ್ಯಜನರ ಸಂಗಡ ಊಟಮಾಡುತ್ತಿದ್ದನು; ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಡೆದ ಸಂಗತಿ ಏನೆಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮುಂಚೆ ಪೇತ್ರನು ಯೆಹೂದ್ಯರಲ್ಲದವರೊಡನೆ ಊಟಮಾಡುತ್ತಿದ್ದನು. ಅವರು ಬಂದ ಮೇಲೆ ಯೆಹೂದ್ಯರಿಗೆ ಅವನು ಭಯಪಟ್ಟು ಯೆಹೂದ್ಯರಲ್ಲದವರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜಾಕೊಬಾನ್ ಧಾಡುನ್ ದಿಲ್ಲಿ ಉಲ್ಲಿ ಲೊಕಾ ಥೈ ಯೆವ್ನ್ ಪಾವುಚ್ಯಾ ಅದ್ದಿ ಪೆದ್ರು ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ವಾಂಗ್ಡಾ ಬಸುನ್ ಜೆವಾನ್ ಕರುಕ್ ಲಾಗಲ್ಲೊ , ಖರೆ ತೆನಿ ಯೆಲ್ಲ್ಯಾ ತನ್ನಾ ಸುನ್ನತ್ ಕರುಕ್ ಪಾಜೆ ಮನುನ್ ಜಬರ್ದಸ್ತಿ ಕರ್‍ತಲ್ಯಾಂಚ್ಯಾ ಭಿಂಯಾನ್, ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿಕ್ನಾ ತೊ ಧುರ್ ರ್‍ಹಾಲೊ ಅನಿ ಎಗ್ಳೊ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:12
16 ತಿಳಿವುಗಳ ಹೋಲಿಕೆ  

ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.


ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.


ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.


ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.


ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.


ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.


ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”


ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು