Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ, ಕೇಫನ ಸಂಗಡ ಇದ್ದ ಮಿಕ್ಕ ಯೆಹೂದ್ಯರು ಕಪಟತನದಿಂದ ವರ್ತಿಸಿದರು. ಇವರ ವರ್ತನೆಗೆ ಬಾರ್ನಬನೂ ಸಹ ಮಾರುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ವಿುಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟ ಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೀಗೆ ಪೇತ್ರನು ಕಪಟತನದಿಂದ ವರ್ತಿಸಿದನು. ಯೆಹೂದ್ಯರಾದ ವಿಶ್ವಾಸಿಗಳು ಸಹ ಪೇತ್ರನನ್ನೇ ಅನುಸರಿಸಿ ಕಪಟತನದಿಂದ ವರ್ತಿಸಿದರು. ಇವರ ವರ್ತನೆಯಿಂದ ಬಾರ್ನಬನು ಸಹ ಪ್ರಭಾವಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಕಪಟಮಾಡಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಒಳಗಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹುರಲ್ಲ್ಯಾ ಜುದೆವಾನಿಬಿ ಪೆದ್ರುನ್ ಕರಲ್ಲ್ಯಾ ಸಾರ್ಕೆಚ್ ಕರ್‍ಲ್ಯಾನಿ, ಬಾರ್ನಾಬಾಸ್ ಸೈತ್ ತೆಂಚ್ಯಾ ಕರ್ನ್ಯಾಕ್ ಮಳ್ಳ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:13
17 ತಿಳಿವುಗಳ ಹೋಲಿಕೆ  

ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.


ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.


ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.


ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.


ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು.


ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.


ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.


ಅವನು, “ನೀನು ನಿಜವಾದ ನನ್ನ ಮಗನಾದ ಏಸಾವನೋ” ಎಂದು ಕೇಳಿದ್ದಕ್ಕೆ ಯಾಕೋಬನು, “ಹೌದು” ಎನ್ನಲು,


ನಿನ್ನ ಹೃದಯವು ಏಕೆ ನಿನ್ನನ್ನು ಸೆಳೆದುಕೊಂಡು ಹೋಗುವುದು? ನಿನ್ನ ಕಣ್ಣುಗಳು ಕಿಡಿಕಿಡಿಯಾಗುವುದೇಕೆ?


ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಇದಲ್ಲದೆ ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವೆ ಸಲ್ಲಿಸುವೆನು” ಎಂದು ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು