Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾವಂತೂ ಜನ್ಮತ ಯೆಹೂದ್ಯರು “ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾವಂತೂ ಹುಟ್ಟು ಯೆಹೂದ್ಯರು. ಪಾಪಿಗಳೆಂದು ಕರೆಯಲಾಗುವ ಅನ್ಯಧರ್ಮೀಯರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾವಂತೂ ಹುಟ್ಟು ಯೆಹೂದ್ಯರು, ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾವಂತೂ ಹುಟ್ಟು ಯೆಹೂದ್ಯರು. ನಾವು ಪಾಪಿಗಳೆನಿಸಿಕೊಂಡಿರುವ ಅನ್ಯಜನರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನಾವಂತೂ ಹುಟ್ಟು ಯೆಹೂದ್ಯರು, ಪಾಪಿಗಳೆಂದು ಕರೆಯಲಾಗುವ ಯೆಹೂದ್ಯರಲ್ಲದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜಲ್ಮಾನಿ ಅಮಿ ಜುದೆವ್, ಅನಿ ತೆನಿ ಸಾಂಗ್ತಲ್ಯಾ ಸಾರ್ಕೆ ಜುದೆವ್ ನ್ಹಯ್ ಹೊತ್ತೆ ಪಾಪಿ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:15
14 ತಿಳಿವುಗಳ ಹೋಲಿಕೆ  

ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.


ನಾನಾದರೋ ಶರೀರಸಂಬಂಧವಾದವುಗಳಲ್ಲಿ ಭರವಸವಿಡುವುದಕ್ಕೂ ಆಸ್ಪದವಿದೆ. ಬೇರೆ ಯಾವನಾದರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಡಬಹುದೆಂದು ಯೋಚಿಸುವುದಾದರೆ ನಾನು ಅವನಿಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.


ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’” ಹೇಳಿದನು.


ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.


ಆತನು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದನು.


ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು