Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕ್ರಿಸ್ತಯೇಸುವಿನ ಮುಖಾಂತರ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಯತ್ನಿಸುತ್ತಿರುವ ನಾವು ಅನ್ಯಧರ್ಮೀಯರಂತೆ ಕಂಡುಬರುವುದಾದರೆ, ಕ್ರಿಸ್ತಯೇಸುವೇ ಪಾಪಕ್ಕೆ ಕಾರಣರೆಂದು ಹೇಳಿದಂತಾಗುತ್ತದೆ. ಆದರೆ ಅದೆಂದಿಗೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ನಾವು ಕ್ರಿಸ್ತನ ಆಶ್ರಯದಲ್ಲಿ ನೀತಿವಂತರೆಂಬ ನಿರ್ಣಯ ಹೊಂದುವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನೆಂದು ಹೇಳಬೇಕೇನು? ಎಂದಿಗೂ ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೂದ್ಯರಾದ ನಾವು ನೀತಿವಂತರಾಗಲು ಕ್ರಿಸ್ತನ ಬಳಿಗೆ ಬಂದೆವು. ಆದ್ದರಿಂದ ನಾವು ಸಹ ಪಾಪಿಗಳಾಗಿದ್ದೇವೆಂಬುದು ಸ್ಪಷ್ಟವಾಗಿದೆ. ಕ್ರಿಸ್ತನು ನಮ್ಮನ್ನು ಪಾಪಿಗಳನ್ನಾಗಿ ಮಾಡುತ್ತಾನೆಂಬುದು ಇದರ ಅರ್ಥವೇ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಆದರೆ, ನಾವು ಕ್ರಿಸ್ತ ಯೇಸುವಿನಲ್ಲಿ ನೀತಿವಂತರಾಗಲು ಪ್ರಯತ್ನಿಸುವ ನಾವೂ ಪಾಪಿಗಳಾಗಿ ಇರುವುದಾದರೆ, ಕ್ರಿಸ್ತ ಯೇಸು ಪಾಪಕ್ಕೆ ಪ್ರೋತ್ಸಾಹ ನೀಡಿದ ಹಾಗಾಗುವುದೋ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆ ಅತ್ತಾ ಕ್ರಿಸ್ತಾಚ್ಯಾ ವೈನಾ ನಿತಿವಂತ್ ಹೊವ್ಕ್ ಅಮಿ ಬಗ್ತಾನಾ, ದುಸ್ರ್ಯಾಂಚ್ಯಾ ಸಾರ್ಕೆ ಅಮಿ ಪಾಪಿ ಮನುನ್ ದಿಸ್ತಾ ಹೊಲ್ಯಾರ್ ಕ್ರಿಸ್ತ್ ಅಮ್ಚ್ಯಾ ಪಾಪಾಚೆ ಕಾರನ್ ಮನುನ್ ಹೊಲೆ ಕಾಯ್? ಬಿಲ್ಕುಲ್ ನಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:17
17 ತಿಳಿವುಗಳ ಹೋಲಿಕೆ  

ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.


ನಾವಂತೂ ಜನ್ಮತ ಯೆಹೂದ್ಯರು “ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.”


ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.


ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.


ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.


ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,


ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?


ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.


ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು