ಗಲಾತ್ಯದವರಿಗೆ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೈವಪ್ರೇರಣೆಗನುಸಾರವಾಗಿ ಹೋದೆನು. ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬದನ್ನು ಅಲ್ಲಿದ್ದವರಿಗೆ ತಿಳಿಸಿದೆನು. ಆದರೆ ನಾನು ಪಡುತ್ತಿರುವ ಪ್ರಯಾಸವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಹೋಗಲೇಬೇಕೆಂದು ದೇವರು ನನಗೆ ತಿಳಿಸಿದ್ದರಿಂದ ವಿಶ್ವಾಸಿಗಳ ನಾಯಕರಾದ ಈ ಜನರ ಬಳಿಗೆ ಹೋದೆನು. ನಾವಷ್ಟೇ ಇದ್ದಾಗ, ಯೆಹೂದ್ಯರಲ್ಲದವರಿಗೆ ಸಾರುವ ಸುವಾರ್ತೆಯನ್ನು ಇವರಿಗೆ ತಿಳಿಸಿದೆನು. ನಾನು ಮೊದಲು ಮಾಡಿದ ಸೇವೆ ಮತ್ತು ಈಗ ಮಾಡುತ್ತಿರುವ ಸೇವೆ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಇವರಿಗೆ ಅರ್ಥವಾಗುವಂತೆ ನನ್ನ ಸೇವೆಯ ಬಗ್ಗೆ ತಿಳಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಖರೆ ಮಿಯಾ ಥೈ ಗೆಲ್ಲೆ ಕಶ್ಯಾಕ್ ಮಟ್ಲ್ಯಾರ್, ಮಾಕಾ ಗಾವಲ್ಲ್ಯಾ ದೆವಾಚ್ಯಾ ಪ್ರೆರನಾಕ್ ಖಾಲ್ತಿ ಹೊವ್ನ್ ಗೆಲ್ಲೊ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ಸಾಂಗುಕ್ ಲಾಗಲ್ಲೊ; ತ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಿಯಾ ಥೈತ್ಲ್ಯಾ ಮುಖಂಡಾಚ್ಯಾ ಇದ್ರಾಕ್ ಸೊಡ್ಸುನ್ ಸಾಂಗಟ್ಲೊ. ಕಶ್ಯಾಕ್ ಮಟ್ಲ್ಯಾರ್ ತವ್ಡೆ ಪತರ್ ಮಿಯಾ ಕರಲ್ಲೆ ಕಾಮ್ ಅನಿ ಅತ್ತಾ ಹೊತಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲೆ ಹೊವ್ಚೆ ನ್ಹಯ್ ಮನ್ತಲೆ ಮಾಕಾ ಪಾಜೆ ಹೊತ್ತೆ. ಅಧ್ಯಾಯವನ್ನು ನೋಡಿ |
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.