Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ಕರ್ಮಮಾರ್ಗದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದಕ್ಕೆ ಕಾರಣವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದು ದೇವರ ವರವಾಗಿದೆ ಮತ್ತು ನನಗೆ ಅತಿಮುಖ್ಯವಾದದ್ದಾಗಿದೆ. ಏಕೆಂದರೆ ಧರ್ಮಶಾಸ್ತ್ರವು ನಮ್ಮನ್ನು ನೀತಿವಂತರನ್ನಾಗಿ ಮಾಡಬಹುದಾಗಿದ್ದರೆ, ಕ್ರಿಸ್ತನು ಸಾಯುವ ಅಗತ್ಯವೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾಚಿ ಕುರ್ಪಾ ನಕ್ಕೊ ಮನುಕ್ ಮಿಯಾ ತಯಾರ್ ನಾ, ಕಶ್ಯಾಕ್ ಮಟ್ಲ್ಯಾರ್ ಖಾಯ್ದ್ಯಾಚ್ಯಾ ವೈನಾ ಮಾನುಸ್ ನಿತಿವಂತ್ ಹೊತಾ ಹೊಲ್ಯಾರ್, ಕ್ರಿಸ್ತ್ ಮರಲ್ಲೆ ಕಾಯ್ಬಿ ಫಾಯ್ದ್ಯಾಚೆ ನ್ಹಯ್ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:21
16 ತಿಳಿವುಗಳ ಹೋಲಿಕೆ  

ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.


ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?


ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು.


ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.


ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.


ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;


ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.


ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.


ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು