Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆ ಹೊತ್ತಾದರೂ ಸಮ್ಮತಿಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಆ ಸುಳ್ಳುಸಹೋದರರು ಬಯಸಿದ ಯಾವುದಕ್ಕೂ ನಾವು ಒಂದು ಕ್ಷಣವಾದರೂ ಒಪ್ಪಿಗೆ ಕೊಡಲಿಲ್ಲ. ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂಬುದೇ ನಮ್ಮ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಖರ್ಯಾ ಬರ್‍ಯಾ ಖಬ್ರಿಚೆ ಶಿಕಾಪ್ ತುಮ್ಚ್ಯಾ ಮದ್ದಿ ಘಟ್ಟ್ ರ್‍ಹಾಯ್ ಸಾರ್ಕೆ ಕರುಕ್ ಸಾಟ್ನಿ ಹ್ಯಾ ಮಾನ್ಸಾಕ್ನಿ ಅಮಿ ಎಕ್ ಉಲ್ಲೊಸೊ ಎಳ್ ಸೈತ್ ಸೊಡುಕ್ನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:5
11 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.


ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಅವರು ನಾಲ್ಕು ಬಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರವನ್ನು ಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು