Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬದಲಾಗಿ, ಯೆಹೂದ್ಯರಿಗೆ ಶುಭಸಂದೇಶವನ್ನು ಸಾರುವ ಸೇವೆಯನ್ನು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರುವ ಸೇವಾಕಾರ್ಯವನ್ನು ದೇವರು ನನಗೆ ವಹಿಸಿಕೊಟ್ಟಿದ್ದಾರೆ ಎಂಬುದನ್ನು ಆ ಗಣ್ಯವ್ಯಕ್ತಿಗಳು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡಿಸುವದಕ್ಕೋಸ್ಕರ ಪೇತ್ರನನ್ನು ಪ್ರೇರಿಸಿದಾತನು ಅನ್ಯಜನರಲ್ಲಿ ಅದನ್ನು ನಡಿಸುವದಕ್ಕೆ ನನ್ನನ್ನೂ ಪ್ರೇರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಪೇತ್ರನಂತೆ ನನಗೂ ದೇವರು ವಿಶೇಷವಾದ ಕೆಲಸವನ್ನು ಕೊಟ್ಟಿದ್ದಾನೆಂಬುದನ್ನು ಈ ನಾಯಕರು ತಿಳಿದುಕೊಂಡರು. ಯೆಹೂದ್ಯರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ಪೇತ್ರನಿಗೆ ಕೊಟ್ಟನು. ಆದರೆ ಯೆಹೂದ್ಯರಲ್ಲದವರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಬದಲಾಗಿ, ಯೆಹೂದ್ಯರಿಗೆ ಸುವಾರ್ತೆ ಸಾರುವುದು ಪೇತ್ರನಿಗೆ ಒಪ್ಪಿಸಿಕೊಟ್ಟಂತೆಯೇ, ಯೆಹೂದ್ಯರಲ್ಲದವರಿಗೆ ಸುವಾರ್ತೆ ಸಾರುವುದು ನನಗೆ ಒಪ್ಪಿಸಲಾಯಿತು ಎಂಬುದನ್ನು ಸಭೆಯ ನಾಯಕರು ಸಹ ಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚ್ಯಾ ಬದ್ಲಾಕ್ ಕಶೆ ಸುನ್ನತ್ ಕರಲ್ಲ್ಯಾಕ್ನಿ ಬರಿ ಖಬರ್ ಪರ್ಗಟ್ ಕರ್‍ತಲೆ ಕಾಮ್ ಪೆದ್ರುಕ್ ಗಾವ್ಲಾ, ತಸೆಚ್ ಸುನ್ನತ್ ಕರಿನಸಲ್ಲ್ಯಾಕ್ನಿ ಬರಿ ಖಬರ್ ಪರ್ಗಟ್ ಕರ್‍ತಲಿ ಕಾಮ್ ಮಾಕಾ ಗಾವ್ಲಾ ಮನುನ್ ತೆನಿ ಸಗ್ಳ್ಯಾನಿ ಒಪ್ಪುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:7
20 ತಿಳಿವುಗಳ ಹೋಲಿಕೆ  

ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.


ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.


ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,


ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು.


ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.


“ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.


ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,


ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.


ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.


ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.


ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು