ಗಲಾತ್ಯದವರಿಗೆ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೇಮನಿಷ್ಠೆಗಳನ್ನು ಆಧಾರಮಾಡಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ಧರ್ಮಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತನೆಂದು ಶಾಸ್ತ್ರದಲ್ಲಿ ಬರೆದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಜೆ ಕೊನ್ ಖಾಯ್ದ್ಯಾಕ್ನಿ ಖಾಯ್ಲ್ ಹೊವ್ನ್ ಚಲ್ತಲ್ಯಾ ವರ್‍ತಿ ಹೊಂದುನ್ ಹಾತ್, ತೆನಿ ಸರಾಪಾತ್ ಹಾತ್, ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ “ಜೆ ಕೊನ್ ಪುಸ್ತಕಾತ್ ಲಿವಲ್ಲ್ಯಾ ಸಗ್ಳ್ಯಾ ಖಾಯ್ದ್ಯಾಕ್ನಿ ಕನ್ನಾಬಿ ಖಾಯ್ಲ್ ಹೊವ್ನ್ ಚಲಿನಸ್ತಾನಾ ರ್‍ಹಾತಾ, ತೊ ದೆವಾಚ್ಯಾ ಸರಾಪಾತ್ ರ್‍ಹಾತಾ!” ಅಧ್ಯಾಯವನ್ನು ನೋಡಿ |
ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.