Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. "ನಿನ್ನ ಸಂತತಿಗಳಿಗೆ" ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಾಗೆಯೇ ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳು ಮಾಡಲಾದವು. ಅದರಲ್ಲಿ, “ನಿನ್ನ ಸಂತತಿಗಳಿಗೆ,” ಎಂದು ಹೇಳಿ ಅನೇಕರನ್ನು ಸೂಚಿಸದೆ, “ನಿನ್ನ ಸಂತತಿಗೆ,” ಎಂದು ಹೇಳಿದ ಒಬ್ಬರನ್ನೇ ಸೂಚಿಸಿದೆ. ಆ ಒಬ್ಬ ವ್ಯಕ್ತಿ ಕ್ರಿಸ್ತ ಯೇಸುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ದೆವಾನ್ ಅಬ್ರಾಹಾಮಾಕ್ ಅನಿ ತೆಚ್ಯಾ ಪಿಳ್ಗಿಕ್ ಗೊಸ್ಟಿಯಾ ದಿಲ್ಯಾನ್, ಪವಿತ್ರ್ ಪುಸ್ತಕ್ ಪಿಳ್ಗಿಯಾಕ್ನಿ ಮನುನ್ ಸಾಂಗಿನಾ ತಸೆ ಮಟ್ಲ್ಯಾರ್ ಲೈ ಲೊಕಾ ಮನುನ್ ಹೊತಾ ಖರೆ ತೆ “ಪಿಳ್ಗಿಕ್” ಮನ್ತಾ, ಕಶ್ಯಾಕ್ ಮಟ್ಲ್ಯಾರ್ ತೊ ಎಕ್ಲ್ಯಾಕುಚ್ ದಾಕ್ವುತಾ, ತೊ ಎಕ್ಲೊ ಕೊನ್ ಮಟ್ಲ್ಯಾರ್ ಕ್ರಿಸ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:16
28 ತಿಳಿವುಗಳ ಹೋಲಿಕೆ  

ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.


ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.


ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;


ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.


ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.


ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ.


ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.


ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.


ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.


ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.


ಅವರು ಇಬ್ರಿಯರೋ? ನಾನೂ ಇಬ್ರಿಯನು. ಅವರು ಇಸ್ರಾಯೇಲ್ಯರೋ? ನಾನೂ ಇಸ್ರಾಯೇಲ್ಯನು. ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು.


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು