ಗಲಾತ್ಯದವರಿಗೆ 3:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹಾಗಾದರೆ ಧರ್ಮಶಾಸ್ತ್ರದ ಉದ್ದೇಶವಾದರೂ ಏನು? ಅಪರಾಧದ ಅರಿವನ್ನು ಮೂಡಿಸುವುದಕ್ಕಾಗಿ ಅದನ್ನು ಕಾಲಕ್ರಮೇಣ ಸೇರಿಸಲಾಯಿತು. ದೇವವಾಗ್ದಾನವನ್ನು ಪಡೆದ ಆ ಸಂತತಿ ಬರುವ ತನಕ ಮಾತ್ರ ಅದು ಇರಲೆಂದು ಕೊಡಲಾಯಿತು. ಅಲ್ಲದೆ, ಕೇವಲ ದೇವದೂತರ ಮುಖಾಂತರ, ಒಬ್ಬ ಮಾನವ ಮಧ್ಯಸ್ಥನ ಮೂಲಕ ಮಾತ್ರ ಅದನ್ನು ನೀಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವ ತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇವಿುಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹಾಗಾದರೆ ಮೋಶೆಯ ನಿಯಮವನ್ನು ಏಕೆ ಕೊಡಲಾಯಿತು? ಅಪರಾಧಗಳ ಅರಿವನ್ನು ಮೂಡಿಸುವುದಕ್ಕಾಗಿ, ನಿಯಮವು ಸೇರಿಸಲಾಯಿತು. ಇದು ಆ ಸಂತತಿಯಾದಾತನು ಬರುವ ವಾಗ್ದಾನದ ತನಕ ಮಾತ್ರವಾಗಿರುವುದು. ಹೀಗೆ ನಿಯಮವು ದೇವದೂತರ ಮುಖಾಂತರ ಮಧ್ಯಸ್ಥನಾದ ಮೋಶೆಯ ಕೈಯಲ್ಲಿ ಕೊಡಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತಸೆ ಹೊಲ್ಯಾರ್ ಖಾಯ್ದ್ಯಾಚೊ ಉದ್ದೆಸ್ ಕಾಯ್? ಹೆ ಖಾಲಿ ಚುಕ್ ಖಲೆ ಮನುನ್ ದಾಕ್ವುಸಾಟ್ನಿ ಹಾಯ್, ಅನಿ ಹಿ ಗೊಸ್ಟ್ ಕರಲ್ಲಿ ಅಬ್ರಾಹಾಮಾಚಿ ಪಿಳ್ಗಿ ಯೆಯ್ ಪಾತರ್ ಮನುನ್ ಹೊತ್ತೆ. ಖಾಯ್ದೊ ದೆವಾಚ್ಯಾ ದುತಾಂಚ್ಯಾ ವೈನಾ ಎಕ್ ಮಾನ್ಸಾಕ್ ಮಧ್ಯಸ್ತ್ ಕರುನ್ ದಿವ್ನ್ ಹೊಲೊ. ಅಧ್ಯಾಯವನ್ನು ನೋಡಿ |