ಗಲಾತ್ಯದವರಿಗೆ 3:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಂತೆಯೇ, ವಿಶ್ವಾಸದ ಮೂಲಕ ನಾವು ದೇವರೊಡನೆ ಸತ್ಸಂಬಂಧ ಹೊಂದುವಂತೆ ಕ್ರಿಸ್ತಯೇಸು ಬರುವತನಕ ಅದು ನಮಗೆ ಕಾವಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಹೀಗಿರಲಾಗಿ ಧರ್ಮಶಾಸ್ತ್ರವು ನಮ್ಮನ್ನು ಕಾಯುವ ಆಳಿನಂತಾಗಿದೆ; ನಾವು ನಂಬಿಕೆಯಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದುವದಕ್ಕಾಗಿ ಕ್ರಿಸ್ತನಲ್ಲಿಗೆ ಸೇರುವ ತನಕ ಅದು ನಮ್ಮನ್ನು ಕಾಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದ್ದರಿಂದ ಕ್ರಿಸ್ತನು ಬರುವ ತನಕ ಧರ್ಮಶಾಸ್ತ್ರವು ನಮಗೆ ಯಜಮಾನನಾಗಿತ್ತು. ಕ್ರಿಸ್ತನು ಬಂದ ತರುವಾಯ ನಾವು ನಂಬಿಕೆಯ ಮೂಲಕ ನೀತಿವಂತರಾಗಿರಲು ಸಾಧ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತಸೆ ಹೊವ್ನ್ ಖಾಯ್ದೊ ಕ್ರಿಸ್ತ್ ಯೆಯ್ ಪಾತರ್ ಅಮ್ಕಾ ಚಾಲ್ವುಲಾಗಲ್ಲೊ, ಅಶೆ ವಿಶ್ವಾಸಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಅಮ್ಕಾ ನಿತಿವಂತ್ ಮನುನ್ ನಿರ್ನಯ್ ಹೊವ್ಕ್ ಸಾಟ್ನಿ. ಅಧ್ಯಾಯವನ್ನು ನೋಡಿ |
ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.