Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ದೀಕ್ಷಾಸ್ನಾನಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹೇಗೆಂದರೆ, ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತುಮಿ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾತ್ ಬಾಲ್ತಿಮ್ ಘೆಟ್ಲ್ಯಾಶಿ ಅನಿ ಅತ್ತಾ ತುಮಿ ಕ್ರಿಸ್ತಾಕುಚ್ ನೆಸ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:27
20 ತಿಳಿವುಗಳ ಹೋಲಿಕೆ  

ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.


ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.


ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.


ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು


ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.


ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,


ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು