ಗಲಾತ್ಯದವರಿಗೆ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈ ವಿಶ್ವಾಸದ ಮೂಲಕವೇ ಅನ್ಯಧರ್ಮೀಯರನ್ನು ಕೂಡ ದೇವರು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ, ಎಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆಯಲಾಗಿತ್ತು. ಈ ಕಾರಣದಿಂದಲೇ ಅಬ್ರಹಾಮನಿಗೆ, “ನಿನ್ನ ಮುಖಾಂತರವೇ ಎಲ್ಲಾ ಜನಾಂಗಗಳು ಆಶೀರ್ವಾದವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಮುಂಚಿತವಾಗಿ ತಿಳಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇವರು ಅನ್ಯಜನರನ್ನು ನಂಬಿಕೆಯ ನಿವಿುತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬದಾಗಿ ಶಾಸ್ತ್ರವು ಮೊದಲೇ ಕಂಡು ಅಬ್ರಹಾಮನಿಗೆ - ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಶುಭವರ್ತಮಾನವನ್ನು ಮುಂಚಿತವಾಗಿಯೇ ತಿಳಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ” ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಪವಿತ್ರ್ ಪುಸ್ತಕ್ ದೆವ್ ಜುದೆವ್ ನ್ಹಯ್ ಹೊತ್ತ್ಯಾಕ್ನಿ ವಿಶ್ವಾಸಾಚ್ಯಾ ವೈನಾ ನಿತಿವಂತ್ ಮನುನ್ ನಿರ್ನಯ್ ಕರ್‍ತಾ, ತೆಚ್ಯಾಸಾಟ್ನಿ ಪವಿತ್ರ್ ಪುಸ್ತಕ್ ಅಬ್ರಾಹಾಮಾಕ್ ಎಕ್ ಬರಿ ಖಬರ್ ಸಾಂಗ್ತಾ; “ತುಜ್ಯಾ ವೈನಾ ದೆವ್ ಸಗ್ಳ್ಯಾ ಬಾಶಾಂಚ್ಯಾ ಲೊಕಾಕ್ನಿ ಆಶಿರ್ವಾದ್ ದಿತಾ”. ಅಧ್ಯಾಯವನ್ನು ನೋಡಿ |