Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮಗಾಗಿ ನಾನು ಪಟ್ಟ ಪ್ರಯಾಸವೆಲ್ಲ ವ್ಯರ್ಥವಾಯಿತೇನೋ ಎಂಬ ಶಂಕೆ ನನ್ನನ್ನು ಕಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ಭಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿಮ್ಮ ವಿಷಯದಲ್ಲಿ ನನಗೆ ಭಯವಾಗಿದೆ. ನಿಮಗೋಸ್ಕರ ನಾನು ಪಟ್ಟ ಪ್ರಯಾಸವು ವ್ಯರ್ಥವಾಗುವುದೆಂಬ ಭಯ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾವು ನಿಮ್ಮ ಮಧ್ಯದಲ್ಲಿ ಪ್ರಯಾಸಪಟ್ಟದ್ದು ವ್ಯರ್ಥವಾಯಿತೇನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಿಯಾ ತುಮ್ಚ್ಯಾಸಾಟ್ನಿ ಕರಲ್ಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲ್ಯಾ ಸಾರ್ಕೆ ಹೊತಾ ಕಾಯ್ಕಿ ಮನ್ತಲೆ ಭಿಂಯೆ ಮಾಕಾ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:11
13 ತಿಳಿವುಗಳ ಹೋಲಿಕೆ  

ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.


ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.


ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.


ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ರೀತಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.


ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ.


ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು