Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪ್ರಿಯ ಸಹೋದರರೇ, ನಾನು ನಿಮ್ಮಂತೆ ಆದಹಾಗೆ, ನೀವೂ ನನ್ನಂತೆ ಆಗಬೇಕೆಂದು ಕಳಕಳಿಯಿಂದ ಕೇಳಿಕೊಳ್ಳುತ್ತೇನೆ. ನೀವು ನನಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಹೋದರರೇ, ನಾನು ನಿಮ್ಮ ಹಾಗೆ ಆದದ್ದರಿಂದ ನೀವು ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಹೋದರ ಸಹೋದರಿಯರೇ, ನಾನೂ ನಿಮ್ಮಂತಿದ್ದೆನು. ಆದ್ದರಿಂದ ದಯವಿಟ್ಟು ನನ್ನಂತೆ ಆಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಿಯರೇ, ನಾನು ನಿಮ್ಮ ಹಾಗೆ ಆದ್ದರಿಂದ ನೀವು ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೆ ಯಾವ ಕೇಡನ್ನೂ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾಜ್ಯಾ ಭಾವಾನು ಅನಿ ಭೆನಿಯಾನು ಮಿಯಾ ಕಸೊ ತುಮ್ಚ್ಯಾ ಸಾರ್ಕೊ ಹೊಲಾ, ತಸೆಚ್ ತುಮಿಬಿ ಮಾಜ್ಯಾ ಸಾರ್ಕೆ ಹೊವಾ, ತುಮಿ ಮಾಕಾ ಕಾಯ್ಬಿ ಅನ್ನ್ಯಾಯ್ ಕರುಕ್‌ನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:12
13 ತಿಳಿವುಗಳ ಹೋಲಿಕೆ  

ಮನಸ್ಸಿಗೆ ನೋವುಂಟುಮಾಡಿದವನು ಒಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹುಜನರನ್ನೂ ನೋಯಿಸಿದ್ದಾನೆ. ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವುದಿಲ್ಲ.


ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.


ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”


ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ; ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವು ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ.


ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; ‘ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ’ ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.


ಕೊರಿಂಥದವರೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡನೆ ಮಾತನಾಡಿದ್ದೇವೆ.


ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ.


ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು