Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೀಗಿರಲಾಗಿ ಸತ್ಯವನ್ನು ನುಡಿಯುವುದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವದರಿಂದ ನಿಮಗೆ ಶತ್ರುವಾಗಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ಈಗ ನಿಮ್ಮ ಶತ್ರುವಾಗಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ತುಮ್ಕಾ ಖರೆ ಸಾಂಗ್ತಲ್ಯಾಸಾಟ್ನಿ; ಅತ್ತಾ ತುಮ್ಚೊ ವೈರಿ ಹೊಲಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:16
17 ತಿಳಿವುಗಳ ಹೋಲಿಕೆ  

ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.


ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.


ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು?


ಆದರೂ, ನಾನು ಸತ್ಯವನ್ನು ಹೇಳುವವನಾಗಿದ್ದರೂ ನೀವು ನನ್ನನ್ನು ನಂಬುವುದಿಲ್ಲ.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.


ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.


ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”


ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.


‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.


ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.


ಅವರು ನಿಮ್ಮನ್ನು ಮೆಚ್ಚಿಸುವುದಕ್ಕೆ ಆಸಕ್ತಿಯನ್ನು ತೋರಿಸುತ್ತಿರುವುದು ಒಳಿತಾಗಿ ಅಲ್ಲ, ನೀವು ಅವರಿಗೆ ಆಸಕ್ತಿಯನ್ನು ತೋರಿಸಬೇಕೆಂದು ಅವರು ನಿಮ್ಮನ್ನು ನನ್ನಿಂದ ಆಗಲಿಸುವುದಕ್ಕೆ ಬಯಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು