ಗಲಾತ್ಯದವರಿಗೆ 4:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇದೊಂದು ಅಲಂಕಾರ ರೂಪ. ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳಿಗೆ ಸದೃಶರಾಗಿದ್ದಾರೆ. ಒಂದು, ಸೀನಾಯ್ ಪರ್ವತದಲ್ಲಿ ಮಾಡಲಾದ ಒಡಂಬಡಿಕೆ; ಅದು ದಾಸತ್ವಕ್ಕೆ ಮಕ್ಕಳನ್ನು ಹೆರುತ್ತದೆ. ಅದನ್ನು ಸೂಚಿಸುವವಳೇ ದಾಸಿ ಹಾಗರಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು; ಅದೇ ಹಾಗರ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಈ ಸಂಗತಿಗಳು ನಮಗೆ ಉಪಮಾನವಾಗಿವೆ. ದೇವರ ಮತ್ತು ಮನುಷ್ಯರ ನಡುವೆ ಆದ ಎರಡು ಒಡಂಬಡಿಕೆಗಳಿಗೆ ಈ ಇಬ್ಬರು ಸ್ತ್ರೀಯರು ಸಂಕೇತವಾಗಿದ್ದಾರೆ. ಸೀನಾಯಿ ಪರ್ವತದ ಮೇಲೆ ದೇವರು ಕೊಟ್ಟ ಧರ್ಮಶಾಸ್ತ್ರವೇ ಮೊದಲನೆ ಒಡಂಬಡಿಕೆ. ಈ ಒಡಂಬಡಿಕೆಯ ಅಧೀನದಲ್ಲಿದ್ದ ಜನರು ಗುಲಾಮರಂತಿದ್ದರು. ತಾಯಿಯಾದ ಹಾಗರಳು ಆ ಒಡಂಬಡಿಕೆಯಂತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಈ ಸಂಗತಿಗಳು ಉಪಮಾನವಾಗಿವೆ. ಹೇಗೆಂದರೆ, ಇವರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು. ಅದೇ ಹಾಗರ್. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಹಿ ಸಂಗ್ತಿಯಾ ಪ್ರತಿ ರುಪಾಚ್ಯಾ ರಿತಿನ್ ಕಳ್ವುನ್ ಘೆವ್ಕ್ ಹೊತಾ: ದೊನ್ ಬಾಯ್ಕೊಮಾನ್ಸಾ ದೊನ್ ಕರಾರಾ ದಾಕ್ವುನ್ ದಿತ್ಯಾತ್, ಜೆ ಕೊನಾಚಿ ಪೊರಾ ಗುಲಾಮಪಾನಾತ್ ಜಲಮ್ಲಾತ್ ತಿ ಹಾಗಾರಾ ಅನಿ ತಿ ಸಿನಾಯ್ ಮಡ್ಡಿ ವರ್‍ತಿ ಕರಲ್ಲೊ ಕರಾರ್ ದಾಕ್ವುನ್ ದಿತಾ. ಅಧ್ಯಾಯವನ್ನು ನೋಡಿ |
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.