Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅರೇಬಿಯಾದಲ್ಲಿರುವ ಸೀನಾಯ್ ಪರ್ವತವನ್ನು ಪ್ರತಿನಿಧಿಸುವ ಈ ಹಾಗರಳು ಈಗಿನ ಜೆರುಸಲೇಮ್ ನಗರವನ್ನು ಹೋಲುತ್ತಾಳೆ. ಹೇಗೆಂದರೆ, ಜೆರುಸಲೇಮ್ ತನ್ನ ಮಕ್ಕಳ ಸಮೇತವಾಗಿ ದಾಸತ್ವದಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹಾಗರ್ ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತ. ಅವಳು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆ ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹಾಗರ್ ಅರೇಬಿಯಾದಲ್ಲಿರುವ ಸೀನಾಯಿ ಪರ್ವತ. ಅದು ಈಗಿನ ಯೆರೂಸಲೇಮಿಗೆ ಸರಿಹೊಂದುತ್ತಾಳೆ. ಏಕೆಂದರೆ ಆಕೆಯು ಈಗಲೂ ತನ್ನ ಮಕ್ಕಳ ಸಹಿತ ದಾಸ್ಯದಲ್ಲಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆ ಹೊವ್ನ್ ಹಾಗಾರಾ ಅರೆಬಿಯಾತ್ಲ್ಯಾ ಸಿನಾಯ್ ಮಡ್ಡಿ ಸಾರ್ಕಿ ಹಾಯ್, ಜುದೆವಾಂಚೆ ಶಾರ್ ಹೊವ್ನ್ ಹೊತ್ತ್ಯಾ ಜರುಜಲೆಮಾಕ್, ಅತ್ತಾಚ್ಯಾ ಜೆರುಜಲೆಮ್ ಶಾರಾಚಿ ಪ್ರತಿರುಪ್ ಹೊವ್ನ್ ಹಾಯ್, ಕಶ್ಯಾಕ್ ಮಟ್ಲ್ಯಾರ್, ತೆ ಅಪ್ಲ್ಯಾ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಗುಲಾಮ್ಗಿರಿತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:25
12 ತಿಳಿವುಗಳ ಹೋಲಿಕೆ  

ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.


ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು.


“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.


ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.


ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು; ಮೇಘಮಂಡಲವು ಮಳೆಸುರಿಸಿತು. ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು, ಆ ಸೀನಾಯ್ ಬೆಟ್ಟವು ಕದಲಿತು.


ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.


“ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.


ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು