Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ಸ್ಥಿತಿಯೂ ಹಾಗೆಯೇ ಇತ್ತು. ನಾವು ಬಾಲಕರಂತೆ ವಿಶ್ವದ ಮೂಲಭೂತ ಶಕ್ತಿಗಳಿಗೆ ಅಧೀನರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದವರ ಬಾಲಬೋಧೆಗೆ ಅಧೀನರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದೇ ರೀತಿಯಲ್ಲಿ ನಾವು ಮೊದಲು ಮಕ್ಕಳಂತಿದ್ದೆವು. ಈ ಪ್ರಪಂಚದ ಉಪಯೋಗವಿಲ್ಲದ ನಿಯಮಗಳಿಗೆ ನಾವು ಗುಲಾಮರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದರಂತೆಯೇ ನಾವು ಬಾಲಕರಾಗಿದ್ದಾಗ ಲೋಕದ ಮೂಲಪಾಠಗಳಿಗೆ ಗುಲಾಮರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಚ್ ಅಮಿಬಿ ಆತ್ಮಿಕ್ ರಿತಿಚ್ಯಾನ್ ವಾಡುಚ್ಯಾ ಅದ್ದಿ ಜಗಾಚ್ಯಾ ಆತ್ಮ್ಯಾಂಚ್ಯಾ ಚಾಲ್ನುಕಿಕ್ ಗುಲಾಮ್ ಹೊವ್ನ್ ಹೊತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:3
20 ತಿಳಿವುಗಳ ಹೋಲಿಕೆ  

ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,


ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.


ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ.


ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?


ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.


ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.


ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.


“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.


ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.


ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.


ತಂದೆಯು ಗೊತ್ತುಮಾಡಿದ ಸಮಯದವರೆಗೂ ಪಾಲಕರ ಮತ್ತು ಕಾರ್ಯನಿರ್ವಾಹಕರ ಅಧೀನದಲ್ಲಿರುವನು.


ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ.


ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.


ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು