Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಪವಿತ್ರಗ್ರಂಥ ಹೇಳುವುದಾದರೂ ಏನು? “ದಾಸಿಯನ್ನೂ ಅವಳ ಮಗನನ್ನೂ ಹೊರಕ್ಕೆ ದೂಡು; ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಪಾಲುಗಾರನಾಗಕೂಡದು.” ಎಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೂ ಶಾಸ್ತ್ರವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯನಾಗಬಾರದೆಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಪವಿತ್ರ ಗ್ರಂಥವು ಏನು ಹೇಳುತ್ತದೆ? “ದಾಸಿಯನ್ನು ಮತ್ತು ಅವಳ ಮಗನನ್ನು ಹೊರಗೆ ಹಾಕು; ಸ್ವತಂತ್ರಳಾದ ಸ್ತ್ರೀಯ ಮಗನು ತನ್ನ ತಂದೆಯು ಹೊಂದಿರುವ ಪ್ರತಿಯೊಂದನ್ನು ಪಡೆದುಕೊಳ್ಳುವನು. ಆದರೆ ದಾಸಿಗೆ ಏನೂ ದೊರೆಯುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ಪವಿತ್ರ ವೇದವು ಏನು ಹೇಳುತ್ತದೆ? “ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಏಕೆಂದರೆ ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಂದಿಗೂ ವಾರಸುದಾರನಾಗಬಾರದು.” ಎಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಖರೆ ಪವಿತ್ರ್ ಪುಸ್ತಕ್ ಕಾಯ್ ಸಾಂಗ್ತಾ? ತೆ ಮನ್ತಾ, ಗುಲಾಮ್ ಬಾಯ್ಕೊಮನ್ಸಿಕ್ ಅನಿ ತಿಚ್ಯಾ ಲೆಕಾಕ್ ಭಾಯ್ರ್ ಘಾಲಾ, ಸ್ವತಂತ್ರ್ ಬಾಯ್ಕೊಮನ್ಸಿಚ್ಯಾ ವಾಂಗ್ಡಾ; ಗುಲಾಮ್ ಬಾಯ್ಕೊಮನ್ಸಿಚ್ಯಾ ಲೆಕಾಕ್ ಬಾಬಾಚ್ಯಾ ಆಸ್ತಿತ್ ವಾಟೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:30
11 ತಿಳಿವುಗಳ ಹೋಲಿಕೆ  

ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?


ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.


ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?


ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ.


ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು.


ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು