ಗಲಾತ್ಯದವರಿಗೆ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194-5 ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4-5 ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4-5 ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಖರೆ ಆಕ್ರಿಕ್ ಸಮಾ ಎಳ್ ಯೆಲೊ, ದೆವಾನ್ ಅಪ್ನಾಚ್ಯಾ ಲೆಕಾಕ್ ಧಾಡುನ್ ದಿಲ್ಯಾನ್, ತೊ ಎಕ್ ಬಾಯ್ಕೊಮನ್ಸಿಚೊ ಲೆಕ್ ಹೊವ್ನ್ ಜಲಮ್ಲೊ ಅನಿ ಜುದೆವಾಂಚ್ಯಾ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ತೊ ಚಲ್ಲೊ, ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.