Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈಗಲಾದರೋ ನೀವು ದೇವರನ್ನು ತಿಳುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ. ಹೀಗಿರಲಾಗಿ ನೀವು ಕೆಲಸಕ್ಕೆ ಬಾರದ ದರಿದ್ರಬಾಲಬೋಧೆಗೆ ಮತ್ತೂ ಅಧೀನರಾಗಬೇಕೆಂದು ಅಪೇಕ್ಷಿಸಿ ಪುನಃ ಅದಕ್ಕೆ ತಿರುಗಿಕೊಳ್ಳುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈಗಲಾದರೋ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅತ್ತಾ ತರಿಬಿ ಖರ್‍ಯಾ ದೆವಾಕ್ ಕಳ್ವುನ್ ಘೆಟ್ಲ್ಯಾಶಿ, ಖರೆ ಸಾಂಗುಚೆ ಹೊಲ್ಯಾರ್ ತುಮ್ಕಾ ಕಳ್ವುನ್ ಘೆಟಲ್ಲೆ ದೆವಾನುಚ್, ಅಶೆ ರ್‍ಹಾತಾನಾ, ತುಮಿ ಅದ್ದಿಚ್ಯಾನ್ ಪಾಳುನ್ಗೆತ್ ಯೆಲ್ಲ್ಯಾ ಬಳ್ ನಸಲ್ಲ್ಯಾ ಅನಿ ಫಾಯ್ದ್ಯಾಕ್ ಪಡಿನಸಲ್ಲ್ಯಾ ನೆಮಾಕ್ನಿ ಕಶ್ಯಾಕ್ ಫಾಟಿ ಪರ್ತುನ್ ಜಾವ್ಚೆ? ತೆಂಕಾ ಅನಿಪರ್ತುನ್ ಗುಲಾಮ್ ಹೊವ್ಚೆ ಮನುನ್ ಕರ್ಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:9
30 ತಿಳಿವುಗಳ ಹೋಲಿಕೆ  

ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.


ನೀವು ಇಷ್ಟು ಬುದ್ಧಿಯಿಲ್ಲದವರೋ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ಸಂಬಂಧವಾಗಿ ಕೊನೆಗೊಳಿಸುವಿರೋ?


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


ಯಾಕೆಂದರೆ ಮೊದಲಿದ್ದ ಆಜ್ಞೆಯು ದುರ್ಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.


ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.


ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’


ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.


ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ.


ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.


ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.


ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.


ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು