Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈಗ ನಮಗೆ ಸ್ವತಂತ್ರವಿದೆ. ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ದೃಢವಾಗಿರಿ. ಮನಸ್ಸನ್ನು ಬದಲಾಯಿಸಿಕೊಂಡು ಮತ್ತೆ ಧರ್ಮಶಾಸ್ತ್ರದ ಗುಲಾಮಗಿರಿಗೆ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಕ್ರಿಸ್ತಾನ್ ಅಮ್ಕಾ ಸ್ವತಂತ್ರ್ ಕರಲ್ಲೆ ಹಾಯ್, ತಸೆ ರ್‍ಹಾತಾನಾ ಸ್ವತಂತ್ರ್ ಹೊವ್ನ್ ರ್‍ಹಾವಾ ಅನಿ ಪರ್ತುನ್ ತುಮ್ಕಾಚ್ ತುಮಿ ಗುಲಾಮ್ಗಿರಿಕ್ ದಿವ್ನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:1
42 ತಿಳಿವುಗಳ ಹೋಲಿಕೆ  

ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.


ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.


ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?


ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ.


ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.


ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.


ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.


ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?


ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.


ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.


ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,


ಆದರೆ ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.


ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.


ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.


ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.


ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ.


ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.


ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು.


ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ಆ ನಿಯಮದಿಂದ ಬಿಡುಗಡೆಯಾದ್ದರಿಂದ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ.


ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.


ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.


ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು