Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಹೇಳುವುದೇನೆಂದರೆ: ನೀವು ಪವಿತ್ರಾತ್ಮರ ಪ್ರೇರಣೆಗನುಸಾರವಾಗಿ ನಡೆದುಕೊಳ್ಳಬೇಕು. ಆಗ, ದೈಹಿಕ ವ್ಯಾಮೋಹಕ್ಕೆ ನೀವು ಈಡಾಗಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಹೇಳುವದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಪವಿತ್ರಾತ್ಮನನ್ನು ಅನುಸರಿಸುವವರಾಗಿರಿ. ಆಗ, ನಿಮ್ಮ ಶರೀರಭಾವವು ಬಯಸುವ ಕೆಟ್ಟ ಸಂಗತಿಗಳನ್ನು ನೀವು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತಸೆ ಹೊವ್ನ್ ಮಿಯಾ ತುಮ್ಕಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಪವಿತ್ರ್ ಆತ್ಮ್ಯಾಕ್ ತುಮ್ಚೆ ಜಿವನ್ ಚಾಲ್ವುಕ್ ಸೊಡಾ, ಅನಿ ತುಮಿ ತುಮ್ಚ್ಯಾ ಆಂಗಾಚ್ಯಾ ಬುರ್ಶ್ಯಾ ಇಚ್ಚ್ಯಾ ಸಾರ್ಕೆ ಚಲುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:16
22 ತಿಳಿವುಗಳ ಹೋಲಿಕೆ  

ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.


ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.


ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,


ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.


ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,


ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,


ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು