Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಾಹ್ಯಾಚಾರಗಳಿಂದ ತಾವು ಒಳ್ಳೆಯವರು ಎನಿಸಿಕೊಳ್ಳಬೇಕೆನ್ನುವವರು ನೀವು ಸುನ್ನತಿಮಾಡಿಸಿಕೊಳ್ಳಬೇಕೆಂದು ಬಲಾತ್ಕಾರ ಮಾಡುತ್ತಿದ್ದಾರೆ. ಕ್ರಿಸ್ತಯೇಸುವಿನ ಶಿಲುಬೆಯ ನಿಮಿತ್ತ ತಮಗೆ ಹಿಂಸೆಬಾಧೆಗಳು ಉಂಟಾಗಬಾರದು ಎಂಬುದೇ ಅವರ ಉದ್ದೇಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬಹಿರಾಚಾರಗಳಿಂದ ಮಾನಪಡೆಯಬೇಕೆಂದಿರುವವರು ಸುನ್ನತಿಮಾಡಿಸಿಕೊಳ್ಳಿರಿ ಎಂಬದಾಗಿ ನಿಮ್ಮನ್ನು ಬಲಾತ್ಕರಿಸುತ್ತಾರೆ. ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದೊಂದೇ ಅವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಕೆಲವರು ನಿಮ್ಮನ್ನು ಒತ್ತಾಯಿಸುತ್ತಿದ್ದಾರೆ. ತಮ್ಮನ್ನು (ಯೆಹೂದ್ಯರು) ಸ್ವೀಕರಿಸಿಕೊಳ್ಳಲಿ ಎಂಬುದೇ ಅವರ ಉದ್ದೇಶ. ಕ್ರಿಸ್ತನ ಶಿಲುಬೆಯ ದೆಸೆಯಿಂದ ತಾವು ಹಿಂಸೆಗೆ ಒಳಗಾಗಬಹುದೆಂಬ ಭಯದಿಂದ ಅವರು ಹೀಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡುವವರೂ ತಮಗೆ ಕ್ರಿಸ್ತ ಯೇಸುವಿನ ಶಿಲುಬೆಯ ನಿಮಿತ್ತ ಹಿಂಸೆಯಾಗಬಾರದೆಂಬುದಕ್ಕಾಗಿಯೇ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಿಮ್ಮನ್ನು ಒತ್ತಾಯ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತುಮಿ ಸುನ್ನತ್ ಕರುನ್ ಘೆವ್ಚೆ ಮನುನ್; ಉಲ್ಲಿ ಲೊಕಾ ತುಮ್ಕಾ ಜಬರ್ದಸ್ತಿ ಕರುಕ್ ಲಾಗ್ಲಾತ್, ಅಪ್ನಾಕ್ನಿ ಜುದೆವಾಂಚಿ ಲೊಕಾ ಮಾನುನ್ ಘೆಂವ್ದಿ ಮನ್ತಲಿ ತೆಂಚಿ ಆಶಾ. ಕ್ರಿಸ್ತಾಚ್ಯಾ ಕುರ್ಸಾ ವೈನಾ ಅಪ್ನಿ ತರಾಸಾಕ್ ಗಾವ್ತಾತ್ ಮನ್ತಲ್ಯಾ ಭಿಂಯಾ ವೈನಾ ತೆನಿ ಅಶೆ ಕರುಕ್ ಲಾಗ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:12
22 ತಿಳಿವುಗಳ ಹೋಲಿಕೆ  

ಸಹೋದರರೇ, ನಾನಾದರೋ ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ನನಗೆ ಹಿಂಸೆಯಾಗುವುದಾದರೂ ಯಾಕೆ? ಹಾಗಿದ್ದ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲಾ?


ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.


ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.


ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.


ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.


ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.


ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.


ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.


ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”


ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವುದಕ್ಕಾಗಲಿ ಅವರೊಂದಿಗೆ ಹೋಲಿಸುವುದಕ್ಕಾಗಲಿ ನಾನು ಇಷ್ಟಪಡುವುದಿಲ್ಲ. ಅವರಂತೂ ತಮ್ಮತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮ್ಮನ್ನು ತಮಗೇ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.


ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.


ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.


ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.


ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.


“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು