ಗಲಾತ್ಯದವರಿಗೆ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅಂಥ ವಿಷಯಗಳ ಬಗ್ಗೆ ನಾನು ಹೆಚ್ಚಳಪಡುವುದೇ ಇಲ್ಲ. ನಾನು ಹೆಮ್ಮೆಪಡಲು ನನಗಿರುವ ಒಂದೇ ಕಾರಣವೇನೆಂದರೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಿಲುಬೆಯೊಂದೇ. ಶಿಲುಬೆಯ ಮೇಲೆ ಯೇಸುವಿಗಾದ ಮರಣದ ಮೂಲಕ ಲೋಕವು ನನ್ನ ಪಾಲಿಗೆ ಸತ್ತುಹೋಯಿತು. ನಾನು ಸಹ ಲೋಕದ ಪಾಲಿಗೆ ಸತ್ತುಹೋದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನನಗಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಹೆಚ್ಚಳ ಪಡುವುದು ಬೇಡವೇ ಬೇಡ. ಅವರ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಮಾಕಾ ತರ್ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಕುರ್ಸಾಚ್ಯಾ ಮೊಟೆಪಾನಾ ಶಿವಾಯ್ ದುಸ್ರೆ ಮೊಟೆಪಾನ್ ಪಾಜೆ ಹೊವ್ಕ್ ನಾ; ಕಶ್ಯಾಕ್ ಮಟ್ಲ್ಯಾರ್, ತೆಚ್ಯಾ ಕುರ್ಸಾ ವೈನಾ ಜಗ್ ಮಾಜ್ಯಾ ವಾಟ್ಯಾಕ್ ಮರ್‍ಲಾ ಅನಿ ಮಿಯಾ ಜಗಾಚ್ಯಾ ವಾಟ್ಯಾಕ್ ಮರ್‍ಲಾ. ಅಧ್ಯಾಯವನ್ನು ನೋಡಿ |