ಚೆಫನ್ಯ 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದು ರೌದ್ರದ ದಿನ, ಕಷ್ಟ - ಸಂಕಟದ ದಿನ, ನಾಶವಿನಾಶದ ದಿನ, ಕತ್ತಲು ಕಾರ್ಗತ್ತಲ ದಿನ, ಕಾರ್ಮುಗಿಲು ಕವಿದ ಕರಾಳ ದಿನ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ದಿನವು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನು ತನ್ನ ಕೋಪವನ್ನು ಆ ದಿವಸದಲ್ಲಿ ತೋರಿಸುವನು. ಆ ದಿವಸಗಳಲ್ಲಿ ಮಹಾ ಸಂಕಟಗಳಿರುವವು. ಅವು ನಾಶನದ ದಿವಸಗಳಾಗಿರುವವು. ಆ ದಿವಸವು ಕತ್ತಲು, ಕಾರ್ಮುಗಿಲು ಕವಿದ ಬಿರುಗಾಳಿಯ ದಿವಸವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ದಿವಸವು ರೌದ್ರದ ದಿವಸವು, ಇಕ್ಕಟ್ಟು ಸಂಕಟಗಳ ದಿವಸವು, ಹಾಳುಪಾಳುಗಳ ದಿವಸವು, ಕತ್ತಲೆ ಮಬ್ಬುಗಳ ದಿವಸವು, ಕಾರ್ಮುಗಿಲ ಕಗ್ಗತ್ತಲ ದಿವಸವು, ಅಧ್ಯಾಯವನ್ನು ನೋಡಿ |