Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನು ಹೇಳುವುದೇನೆಂದರೆ, “ಜನರ ಜೀವನವನ್ನು ನಾನು ಬಹು ಕಷ್ಟಕರವಾಗಿ ಮಾಡುವೆನು. ಅವರು ಕುರುಡರಂತೆ ಅತ್ತಿತ್ತ ತೊಳಲಾಡುವರು. ತಾವು ಎಲ್ಲಿಗೆ ಹೋಗುತ್ತಿದ್ದಾರೆಂದು ಅವರಿಗೆ ತಿಳಿಯದು. ಯಾಕೆಂದರೆ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದಾರೆ. ಅನೇಕ ಮಂದಿ ಕೊಲ್ಲಲ್ಪಡುವರು. ಅವರ ರಕ್ತವು ಭೂಮಿಗೆ ಸುರಿಯಲ್ಪಡುವುದು. ಅವರ ಹೆಣಗಳು ಮಲದ ಹಾಗೆ ನೆಲದಲ್ಲಿ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:17
41 ತಿಳಿವುಗಳ ಹೋಲಿಕೆ  

ಆದರೆ ಅಷ್ಟರೊಳಗೆ ಈ ದೇಶವು ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.


ನೀನು ನಿನ್ನ ವಿಷಯದಲ್ಲಿ ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.


ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.


ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.


ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.


ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.


“ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.


ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.


ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!


ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.


ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.


“ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.


“ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.


ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.


“ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.


ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ, ರೋಷವನ್ನೆಬ್ಬಿಸುವ ಹಾಗೆ, ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಅದನ್ನು ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.”


ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು