Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರ ಬೆಳ್ಳಿಬಂಗಾರಗಳು ಅವರ ಸಹಾಯಕ್ಕೆ ಬಾರವು. ಆ ಸಮಯದಲ್ಲಿ ಯೆಹೋವನು ಕೋಪಾಗ್ನಿಯಿಂದ ತುಂಬಿದವನಾಗುವನು. ಯೆಹೋವನು ಇಡೀ ಪ್ರಪಂಚವನ್ನೇ ನಾಶಮಾಡುವನು. ಭೂಮಿಯ ಮೇಲಿರುವ ಪ್ರತಿಯೊಬ್ಬನನ್ನು ಯೆಹೋವನು ಸಂಪೂರ್ಣವಾಗಿ ನಾಶಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:18
40 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.


ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.


ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.


ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?


ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.


ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ!


ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.


ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”


ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.


ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.


ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ತಮ್ಮ ಪೂರ್ವಿಕರಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.


ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.


ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.


ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?


ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?


ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?


ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!


ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.


ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.


ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.


ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು.


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು