Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ; ಯೆಹೋವನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಮಡಿಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಞವನ್ನು ತಯಾರು ಮಾಡಿ ತನ್ನ ಆಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:7
39 ತಿಳಿವುಗಳ ಹೋಲಿಕೆ  

ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.”


ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.


ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.


ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.


ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.


ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.


ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಶವವನ್ನು ಸುಡಲು ಬಂದ ಸಂಬಂಧಿಕರು, ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮ ಹತ್ತಿರ ಇನ್ನೂ ಯಾರಾದರೂ ಇದ್ದಾರೋ?” ಎಂದು ಮನೆಯಲ್ಲಿರುವವರನ್ನು ಕೇಳುವಾಗ ಅವನು, “ಇಲ್ಲ” ಎನ್ನುವನು. ಆಗ ಸಂಬಂಧಿಕನು, “ಸುಮ್ಮನಿರು, ನಾವು ಯೆಹೋವನ ಹೆಸರನ್ನು ನೆನಪುಮಾಡಿಕೊಳ್ಳಬಾರದು.”


ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?


“ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.


ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.


ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.


ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.


ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.


“ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ನ್ಯಾಯತೀರ್ಪಿನ ದಿನಗಳು ಏಕೆ ಗೋಚರವಾಗುವುದಿಲ್ಲ?


ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ.


ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.


ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.


ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”


ಆಹಾ, ಚೀಯೋನೇ, ಯೆಹೋವನ ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು