ಚೆಫನ್ಯ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸ್ತಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದು ದನಗಳ ಹಿಂಡುಗಳಿಗೂ ಕುರಿಗಳ ಮಂದೆಗಳಿಗೂ ಎಲ್ಲಾ ತರದ ಪ್ರಾಣಿಗಳಿಗೂ ಮಲಗುವ ಹಟ್ಟಿ ಆಗುವುದು; ಅದರ ಹಾಳುಬಿದ್ದ ಮನೆಗಂಬಗಳ ಮೇಲೆ ಗೂಬೆಗಳೂ, ಗುಬ್ಬಚ್ಚಿಗಳೂ ತಂಗುವುವು. ಗೂಬೆಯ ಘೂಂಕಾರವು ಕಿಟಕಿಯಿಂದ ಕೇಳಿಬರುವುದು; ಕಾಗೆಗಳ ಕೂಗು ಬಾಗಿಲಿನ ಹೊಸ್ತಿಲಲ್ಲೇ ಕೇಳುವುದು; ದೇವದಾರು ಮರದ ತೊಲೆಗಳು ಕಳಚಿಬೀಳುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ ಮುಳ್ಳುಹಂದಿಯೂ ಅದರ ಬೋದಿಗೆಗಳಲ್ಲಿ ವಾಸಮಾಡಿಕೊಳ್ಳುವವು; ಕಿಟಕಿಗಳಲ್ಲಿ ಚಿಲಿಪಿಲಿಗಾನವು ಕೇಳಿಸುವದು; ಹೊಸ್ತಿಲುಗಳಲ್ಲಿ ಹಾಳುಬಡಿಯುವದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಮೇಲೆ ಆ ಹಾಳುಬಿದ್ದ ನಗರದಲ್ಲಿ ಕಾಡುಪ್ರಾಣಿಗಳೂ ಕುರಿಗಳೂ ವಾಸಮಾಡುವವು. ಕಾಗೆಗಳೂ ಗೂಬೆಗಳೂ ಪಟ್ಟಣದ ಸ್ತಂಭಗಳ ಮೇಲೆ ಕುಳಿತುಕೊಂಡು ಒಂದನ್ನೊಂದು ಕರೆಯುವವು. ಬಾಗಿಲ ಹೊಸ್ತಿಲಲ್ಲಿ ಕಾಗೆಗಳು ಕುಳಿತುಕೊಳ್ಳುವವು. ಕಪ್ಪುಪಕ್ಷಿಗಳು ನಿರ್ಜನವಾದ ಮನೆಗಳ ಮೇಲೆ ಕುಳಿತುಕೊಳ್ಳುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದು ದನಗಳ ಹಿಂಡುಗಳಿಗೂ ಕುರಿಗಳ ಮಂದೆಗಳಿಗೂ ಎಲ್ಲಾ ತರದ ಪ್ರಾಣಿಗಳಿಗೂ ಮಲಗುವ ಹಟ್ಟಿ ಆಗುವುದು, ಅದರ ಹಾಳುಬಿದ್ದ ಮನೆಯ ಕಂಬಗಳ ಮೇಲೆ ಗೂಬೆಗಳೂ, ಗುಬ್ಬಚ್ಚಿಗಳೂ ತಂಗುವುವು. ಗೂಬೆಯ ಘೂಂಕಾರವು ಕಿಟಕಿಗಳಿಂದ ಕೇಳಿಬರುವುದು, ಕಾಗೆಗಳ ಕೂಗು ಬಾಗಿಲಿನ ಹೊಸ್ತಿಲಲ್ಲೇ ಕೇಳುವುದು, ದೇವದಾರು ಮರದ ತೊಲೆಗಳು ಕಳಚಿಬೀಳುವುವು. ಅಧ್ಯಾಯವನ್ನು ನೋಡಿ |