ಚೆಫನ್ಯ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈ ನಿನೆವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ - ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಹಕ್ಕೆಯಾಗಿದೆ! ಹಾದುಹೋಗುವವರೆಲ್ಲರೂ ಸಿಳ್ಳುಹಾಕಿ ಕೈಯಾಡಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ನಿಶ್ಚಿಂತೆಯಾಗಿ ವಾಸಿಸಿದಂಥ ಉಲ್ಲಾಸದ ಪಟ್ಟಣ ನಾನೇ ಹೊರತು ಮತ್ತೊಂದಿಲ್ಲಾ,” ಎಂದು ತನ್ನೊಳಗೆ ಎಂದುಕೊಂಡಂಥ ಸುಭದ್ರ ನಿನೆವೆ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದರಲ್ಲಿ ಹಾದುಹೋಗುವವರೆಲ್ಲರೂ ನಿಂದಿಸಿ ಅಪಹಾಸ್ಯ ಮಾಡುವರು. ಅಧ್ಯಾಯವನ್ನು ನೋಡಿ |