Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಕರಾವಳಿಯು ಅಳಿದುಳಿದ ಯೆಹೂದ್ಯರ ಪಾಲಾಗುವುದು; ಅವರ ದನಕುರಿಗಳಿಗೆ ಹುಲ್ಲುಗಾವಲಾಗುವುದು; ಅಷ್ಕೆಲೋನಿನ ಮನೆಗಳು ಅವರಿಗೆ ವಿಶ್ರಾಂತಿ ನಿಲಯಗಳಾಗುವುವು. ದೇವರಾದ ಸರ್ವೇಶ್ವರ ಅವರನ್ನು ಪರಿಪಾಲಿಸುವರು ಮತ್ತು ಅವರನ್ನು ಮರಳಿ ಏಳಿಗೆಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಕರಾವಳಿಯು ಯೆಹೂದವಂಶಶೇಷದವರ ಪಾಲಾಗುವದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ದೇಶವು ಯೆಹೂದದಲ್ಲಿ ಅಳಿದುಳಿದವರಿಗೆ ಆಗುವದು. ಯೆಹೂದದಲ್ಲಿರುವ ಜನರನ್ನು ಯೆಹೋವನು ನೆನಪುಮಾಡುವನು. ಅವರು ಸೆರೆಯಾಳುಗಳಾಗಿ ಅನ್ಯದೇಶದಲ್ಲಿರುವರು. ಆದರೆ ಯೆಹೋವನು ಅವರನ್ನು ಹಿಂದಕ್ಕೆ ತರುವನು. ಆಗ ಯೆಹೂದದ ಜನರು ಆ ಬಯಲಿನಲ್ಲಿ ತಮ್ಮ ಕುರಿಮಂದೆಗಳನ್ನು ಮೇಯಿಸುವರು. ಸಾಯಂಕಾಲ ಬರಿದಾದ ಅಷ್ಕೆಲೋನಿನ ಮನೆಗಳಲ್ಲಿ ತಂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದು ಯೆಹೂದದ ಮನೆತನದಲ್ಲಿ ಉಳಿದವರ ವಶವಾಗುವುದು. ಅದರ ಮೇಲೆ ಮೇಯಿಸುವರು. ಅಷ್ಕೆಲೋನಿನ ಮನೆತನಗಳಲ್ಲಿ ಸಾಯಂಕಾಲದಲ್ಲಿ ಅವರು ಮಲಗಿಕೊಳ್ಳುವರು. ಏಕೆಂದರೆ ಅವರ ದೇವರಾದ ಯೆಹೋವ ದೇವರು, ಅವರನ್ನು ಪರಿಪಾಲಿಸಿ, ಮತ್ತೆ ಏಳಿಗೆಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:7
42 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.


ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.


“ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;


ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.


ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.


ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಳಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.


ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.


ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.


ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.


ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.


ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.


ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.


ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.


ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.


“ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,


ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”


ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.


ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು.


ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.


ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.


ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.


“ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?


ಯೆಹೂದವೇ, ನಿನಗೂ ಅಧರ್ಮಫಲದ ಸುಗ್ಗಿಯು ನೇಮಕವಾಗಿದೆ.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”


ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು