ಚೆಫನ್ಯ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.” ಅಧ್ಯಾಯವನ್ನು ನೋಡಿ |