ಚೆಫನ್ಯ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿನಗೆ ವಿಧಿಸಿದ ದಂಡನೆಗಳನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ನಿನ್ನ ಶಿಕ್ಷೆಗಳನ್ನು ದೂರಮಾಡಿ ನಿನ್ನ ಶತ್ರುವನ್ನು ತೆಗೆದುಹಾಕಿದ್ದಾರೆ. ಇಸ್ರಾಯೇಲಿನ ಅರಸನಾದ ಯೆಹೋವ ದೇವರು ನಿನ್ನ ಮಧ್ಯದಲ್ಲಿ ಇದ್ದಾರೆ. ಇನ್ನು ಮೇಲೆ ನಿನಗೆ ಯಾವ ಕೇಡಿನ ಭಯವಿರುವುದಿಲ್ಲ. ಅಧ್ಯಾಯವನ್ನು ನೋಡಿ |