ಚೆಫನ್ಯ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ. ಆತನು ರಣಶೂರನು. ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು. ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು. ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.” ಅಧ್ಯಾಯವನ್ನು ನೋಡಿ |