Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕಾಡುತ್ತಿದೆ ಎಂದು ತಿಳಿದು ಹಬ್ಬ ಉತ್ಸವಗಳಿಗೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ತಡೆದುಬಿಡುವನು ಸರ್ವವಿನಾಶವನು ದೂರಮಾಡುವನು ನಿನ್ನಿಂದ ನಿಂದೆ ಅಪಮಾನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಯ್ಯೋ, ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕೂತಿದೆ ಎಂದು ಮಹೋತ್ಸವಕ್ಕೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿನ್ನ ನಾಚಿಕೆಯನ್ನು ತೆಗೆದುಬಿಡುವನು. ನಿನ್ನನ್ನು ಹಿಂಸಿಸುವ ಜನರನ್ನು ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನೇಮಕವಾದ ಹಬ್ಬಗಳ ನಷ್ಟಕ್ಕಾಗಿರುವ ನಿಮ್ಮ ದುಃಖವನ್ನು ನಿಮ್ಮಿಂದ ನಾನು ತೆಗೆದುಬಿಡುವೆನು. ಅವು ನಿನಗೆ ಭಾರವಾಗಿಯೂ ನಿಂದೆಯಾಗಿಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:18
18 ತಿಳಿವುಗಳ ಹೋಲಿಕೆ  

“ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.


ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.


ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.


ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿನದಲ್ಲಿ ಏನು ಮಾಡುವಿರಿ?


ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


“‘“ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.


ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.


ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು