ಚೆಫನ್ಯ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದರ ಪ್ರವಾದಿಗಳು ಬಡಾಯಿಕೊಚ್ಚುವವರು, ವಿಶ್ವಾಸದ್ರೋಹಿಗಳು. ಅದರ ಯಾಜಕರು ಪವಿತ್ರವಾದುದನ್ನು ಹೊಲೆಗೆಡಿಸುವಂಥವರು, ಧರ್ಮವಿಧಿಗಳನ್ನು ಭಂಗಪಡಿಸುವಂಥವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದರ ಪ್ರವಾದಿಗಳು ಬಡಾಯಿಗಾರರು, ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವಳ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರೂ ವಿಶ್ವಾಸದ್ರೋಹಿಗಳೂ ಆಗಿದ್ದಾರೆ. ಅವಳ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರಮಾಡುತ್ತಾರೆ, ದೈವನಿಯಮವನ್ನು ಭಂಗಪಡಿಸುತ್ತಾರೆ. ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.