Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ದೇವರು ಇನ್ನೂ ಆ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೆಯದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ಆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:5
41 ತಿಳಿವುಗಳ ಹೋಲಿಕೆ  

ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!


ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.


ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.


ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.


ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.


ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.


ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ!


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು.


ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.


ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.


ನಾನು ಯೆಹೋವನಿಗೆ ಪಾಪ ಮಾಡಿದ್ದರಿಂದ ಆತನ ಕೋಪವನ್ನು ತಾಳಿಕೊಂಡಿರುವೆನು. ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ, ನನಗೆ ನ್ಯಾಯವನ್ನು ತೀರಿಸುವನು. ನನ್ನನ್ನು ಬೆಳಕಿಗೆ ತರುವನು. ಆತನ ರಕ್ಷಣಾಧರ್ಮವನ್ನು ನೋಡುವೆನು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.


ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.


ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ. ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.


ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವನೋ?


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ದಿನಂಪ್ರತಿ ಅವನ ಮೇಲೆ ಲಕ್ಷ್ಯವಿಟ್ಟು, ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವುದೇಕೆ?


ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.


“ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”


ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು