ಚೆಫನ್ಯ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ಇಂತೆನ್ನುತ್ತಾನೆ, “ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೋಟೆ ಕೊತ್ತಲುಗಳು ಪಾಳು ಬಿದ್ದವು; ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ; ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಾಮವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ರಾಷ್ಟ್ರಗಳನ್ನು ಧ್ವಂಸಮಾಡಿದ್ದೇನೆ. ಅವುಗಳ ಕೋಟೆಕೊತ್ತಲಗಳು ಪಾಳುಬಿದ್ದಿವೆ. ಅವುಗಳ ಹಾದಿಬೀದಿಗಳನ್ನು ನಿರ್ಜನವಾಗಿಸಿದ್ದೇನೆ. ಯಾರೂ ಅವುಗಳಲ್ಲಿ ಹಾದುಹೋಗುವಂತಿಲ್ಲ. ಅವರ ಪಟ್ಟಣಗಳು ನಾಶವಾಗಿವೆ; ನಿರ್ನಿವಾಸವಾಗಿ ಶೂನ್ಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 [ಯೆಹೋವನು ಇಂತೆನ್ನುತ್ತಾನೆ - ] ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೊತ್ತಲಗಳು ಪಾಳುಬಿದ್ದವು, ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ, ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಿವಾಸವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ಹೀಗೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ. ಅವುಗಳ ಗೋಪುರಗಳು ಹಾಳಾಗಿವೆ. ಅವುಗಳ ಬೀದಿಗಳನ್ನು ಯಾರೂ ಹಾದುಹೋಗದ ಹಾಗೆ ಹಾಳುಮಾಡಿದ್ದೆನೆ. ಅವುಗಳ ಪಟ್ಟಣಗಳು ನಾಶವಾದವು. ಹೀಗೆ ಅಲ್ಲಿ ಯಾವನೂ ಇರುವುದಿಲ್ಲ; ಯಾವ ಮನುಷ್ಯನೂ ಅಲ್ಲಿ ವಾಸಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿ |