ಚೆಫನ್ಯ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು. ಅಧ್ಯಾಯವನ್ನು ನೋಡಿ |