ಜೆಕರ್ಯ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದುದರಿಂದ ನಾನು ಕರುಣಾಮಯನಾಗಿ ಜೆರುಸಲೇಮಿಗೆ ಹಿಂದಿರುಗಿ ಬಂದಿದ್ದೇನೆ. ಅಲ್ಲಿ ನನ್ನ ಆಲಯವನ್ನು ಮರಳಿ ಕಟ್ಟಲಾಗುವುದು. ಜೆರುಸಲೇಮ್ ನಗರವನ್ನು ವಾಸ್ತುಶಿಲ್ಪಕ್ಕೆ ತಕ್ಕಂತೆ ನಿರ್ಮಿಸಲಾಗುವುದು. ಇದು ಸೇನಾಧೀಶ್ವರ ಸರ್ವೇಶ್ವರನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ನಾನು ಕನಿಕರವುಳ್ಳವನಾಗಿ ಯೆರೂಸಲೇವಿುಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು; ಯೆರೂಸಲೇವಿುನಲ್ಲಿ ನೂಲು ಎಳೆಯಲ್ಪಡುವದು; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದ್ದರಿಂದ ಯೆಹೋವನು ಹೀಗೆನ್ನುತ್ತಾನೆ: “ನಾನು ಜೆರುಸಲೇಮಿಗೆ ಹಿಂತಿರುಗಿ ಬರುವೆನು. ಬಂದು ಆಕೆಯನ್ನು ಸಂತೈಸುವೆನು.” ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಜೆರುಸಲೇಮ್ ತಿರುಗಿ ಕಟ್ಟಲ್ಪಡುವದು ಮತ್ತು ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ. ನನ್ನ ಆಲಯವು ಅದರಲ್ಲಿ ಕಟ್ಟಲಾಗುವುದು. ಯೆರೂಸಲೇಮಿನ ಮೇಲೆ ಅಳತೆಯ ನೂಲು ಚಾಚಲಾಗುವುದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |