Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಕಣ್ಣೆತ್ತಿ ನೋಡಲು ಇಗೋ, ನಾಲ್ಕು ಕೊಂಬುಗಳು ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮತ್ತೊಂದು ದರ್ಶನದಲ್ಲಿ ನಾನು ನಾಲ್ಕು ಕೊಂಬುಗಳನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಕಣ್ಣೆತ್ತಿನೋಡಲು ಇಗೋ, ನಾಲ್ಕು ಕೊಂಬುಗಳು ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ನಾನು ಮೇಲೆ ನೋಡಿದಾಗ ನಾಲ್ಕು ಕೊಂಬುಗಳನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ನನ್ನ ಕಣ್ಣುಗಳನ್ನು ಎತ್ತಿದಾಗ, ನಾಲ್ಕು ಕೊಂಬುಗಳನ್ನು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:18
17 ತಿಳಿವುಗಳ ಹೋಲಿಕೆ  

ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು


ನಾನು ಕಣ್ಣೆತ್ತಿ ನೋಡಲು, ಆಹಾ ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು. ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು. ಅವರು ಅಳತೆಯ ಬುಟ್ಟಿಯನ್ನು ಎತ್ತಿಕೊಂಡು ಹಾರಿ ಹೋದರು.


ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ಕಂಡು ಬರುತ್ತಿರುವ ಆ ವಸ್ತು ಏನೆಂದು ನೋಡು” ಎಂಬುದಾಗಿ ನನಗೆ ಹೇಳಿದನು.


ಆಗ ನಾನು ಕಣ್ಣೆತ್ತಿ ನೋಡಲು ಇಗೋ, ಹಾರುತ್ತಿರುವ ಒಂದು ಸುರುಳಿಯು ಕಾಣಿಸಿತು.


ನಾನು ಕಣ್ಣಿತ್ತಿ ನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.


ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.


ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”


ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.


ನಂತರ ನಾನು ಕಣ್ಣೆತ್ತಿ ನೋಡಲು, ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅ ಬೆಟ್ಟಗಳು ತಾಮ್ರದವುಗಳಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು