Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಂದೇ ನೀನು ನನ್ನ ಜನರಿಗೆ ಹೀಗೆಂದು ಹೇಳು: “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮರಳಿ ನನಗೆ ಅಭಿಮುಖರಾಗಿರಿ. ಆಗ ನಾನು ನಿಮಗೆ ಮರಳಿ ಅಭಿಮುಖನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಕಡೆಗೆ ಪುನಃ ತಿರುಗಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ; ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ನಿನ್ನ ಜನರಿಗೆ ನೀನು ಈ ವಿಷಯಗಳನ್ನು ತಿಳಿಸಬೇಕು. ಯೆಹೋವನು ಹೇಳುವುದೇನೆಂದರೆ, “ನನ್ನ ಬಳಿಗೆ ಹಿಂದಿರುಗಿರಿ. ಆಗ ನಾನು ನಿಮ್ಮ ಬಳಿಗೆ ಹಿಂದಿರುಗುವೆನು” ಇದು ಸರ್ವಶಕ್ತನಾದ ಯೆಹೋವನ ಮಾತುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:3
33 ತಿಳಿವುಗಳ ಹೋಲಿಕೆ  

“ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.


“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.


ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”


ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.


ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.


“ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.


ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ಉಪಶಮನವನ್ನು ಪಡೆದ ಮೇಲೆ ಅವರು ತಿರುಗಿ ದ್ರೋಹಿಗಳಾಗಿ ನಡೆಯುತ್ತಿರುವುದನ್ನು ನೀನು ಕಂಡು ಅವರ ಮೇಲೆ ದೊರೆತನ ನಡೆಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದೆ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪುನಃ ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿದೆ.


ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.


ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.


ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?


“ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


“ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?


ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು